Breaking News

ಜೂನ್ ತಿಂಗಳ ರೇಷನ್‌ ಬಿಡುಗಡೆ

Spread the love

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆ.ಜಿ ಗೆ 15 ರೂ.ಗಳ ದರದಲ್ಲಿ ವಿತರಣೆ ಮಾಡಲಾಗುತ್ತದೆ.

ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ