Breaking News

SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ,ಮುಡಾ’ ಹಗರಣದಲ್ಲಿ ಸಿಎಂ ಇಡೀ ಕುಟುಂಬವೆ ಭಾಗಿ

Spread the love

SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ

ಶಿವಮೊಗ್ಗ : ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಎಂದು ವಾಗ್ದಾಳಿ ನಡೆಸಿದರು.

 

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಿಷ್ಠ ನೋಟಿಸ್ ಕೊಟ್ಟು ನಾಗೇಂದ್ರಗೆ ಅಧಿಕಾರಿಗಳು ವಿಚಾರಣೆಗೆ ಕರೆದಿಲ್ಲ. ಎಸ್‌ಐಟಿ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಅವರಿಗೆ ಖುಷಿ ಬಂದ ರೀತಿ ತನಿಖೆ ಮಾಡಿದರೆ ನ್ಯಾಯ ಸಿಗಲ್ಲ ಪರಿಶಿಷ್ಟ ಪಂಗಡಕ್ಕೆ ನ್ಯಾಯ ಸಿಗುವುದಕ್ಕೆ ಸಾಧ್ಯವೇ ಇಲ್ಲ ಎಂದರು.

ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಸಮಸ್ಯೆ ಇರಲಿಲ್ಲ. ಕಳೆದ ಬಾರಿ ಸಮಸ್ಯೆ ಇಲ್ಲದೆ ಸಿದ್ದರಾಮಯ್ಯ ಆಡಳಿತ ಮಾಡಿದ್ದರು. ಅನುಭವಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

‘ಮುಡಾ’ ಹಗರಣದಲ್ಲಿ ಸಿಎಂ ಇಡೀ ಕುಟುಂಬವೆ ಭಾಗಿ

ಇನ್ನೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಡೀ ಕುಟುಂಬ ಭಾಗಿಯಾಗಿದೆ ಎಂದು ಆರೋಪಿಸಿದರು. ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಮುಡಾ ಹಗರಣವನ್ನು ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇವೆ. ಮುಖ್ಯಮಂತ್ರಿಗಳೇ ಈ ಹರಣದಲ್ಲಿ ಸಿಲುಕಿಕೊಂಡಿದ್ದಾರೆ.ಹೀಗಾಗಿ ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಎಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ