ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ಜ್ಯೋತಿ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಸಹಯೋಗದಲ್ಲಿ ನೀಡುವ 2024ನೇ ಸಾಲಿನ ‘ವ್ಯಾಸಜ್ಯೋತಿ ಪ್ರಶಸ್ತಿ’ಗೆ ವೇದಬ್ರಹ್ಮ ಶ್ರೀ ಅನಂತನಾರಾಯಣ ವಾದ್ಯಾರ್ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯು ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಜು. 21ರಂದು ್ಗ ಭಾರತೀಯ ವಿದ್ಯಾ ಭವನದ ಕೆ.ಆರ್.ಜಿ. ಸಭಾಂಗಣದಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ವಿಶ್ವಸ್ಥರಾದ ಎಂ. ನರಸಿಂಹನ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಡಾ. ಪಿ.ಎಸ್. ಗೀತಾ ಅವರು ‘ಗುರುವಿನ ಮಹತ್ವ’ ವಿಷಯ ಕುರಿತು ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.