ಧಾರವಾಡ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ, ಜಾಗ ಮಂಜೂರಾದರೂ ಕಾಮಗಾರಿ ಆರಂಭವಾಗಿಲ್ಲ. ಶಿಥಿಲಸ್ಥಿತಿಗೆ ತಲುಪಿರುವ ಸೋರುವ ಕಟ್ಟಡದಲ್ಲಿಯೇ ವಿದ್ಯಾರ್ಥಿನಿಯರು ಪಾಠ ಕೇಳುವ ಸ್ಥಿತಿ ಇದೆ.
ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಮುಂಭಾಗದ ಇಎಲ್‌ಟಿಸಿ (ಇಂಗ್ಲಿಷ್ ಲಾಂಗ್ವೆಜ್ ಲರ್ನಿಂಗ್ ಕೋರ್ಸ್ ಫಾರ್ ಟೀಚರ‍್ಸ್) ಕಟ್ಟಡದಲ್ಲಿ ಈ ಕಾಲೇಜು ಇದೆ.

ಕಾಲೇಜು ಆರಂಭವಾಗಿ ದಶಕ ಕಳೆದರೂ ಸ್ವಂತ ಕಟ್ಟಡ ಇಲ್ಲ, ಶಿಥಿಲವಾಗಿರುವ ಕಟ್ಟಡವೇ ಗತಿಯಾಗಿದೆ.
ಕಳೆದ ವರ್ಷ ಮಳೆಗಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಎಲ್‌ಟಿಸಿ ಕಟ್ಟಡದ ದುಃಸ್ಥಿತಿ ವೀಕ್ಷಿಸಿದ್ದರು. ಈ ಕಾಲೇಜಿಗ ಸ್ವಂತ ಕಟ್ಟಡ ನಿರ್ಮಾಣಕ್ಕೆ ಇಎಲ್‌ಟಿಸಿ ಕಟ್ಟಡ ಇರುವ ಒಂದು ಎಕರೆ ಜಾಗ ಮಂಜೂರಾಗಿದೆ. ಕಟ್ಟಡ ನಿರ್ಮಾಣಕ್ಕೆ ₹ 3.5 ಕೋಟಿ ಅನುದಾನ ಮಂಜೂರಾಗಿದೆ. ಈ ವರ್ಷ ₹ 1.16 ಕೋಟಿ ಬಿಡುಗಡೆಗೆ ಆದೇಶಿಸಲಾಗಿದೆ. ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಗೆ ವಹಿಸಲಾಗಿದೆ. ಆದರೆ, ಈವರೆಗೆ ಕಾಮಗಾರಿ ಆರಂಭವಾಗಿಲ್ಲ.
ಕಟ್ಟಡ ಕಾಮಗಾರಿ ಆರಂಭಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು, ಸಚಿವ ಸಂತೋಷ್ ಲಾಡ್ ಹಾಗೂ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಹಲವು ಬಾರಿ ಮನವಿ ಸಲ್ಲಿಸಿದ್ದಾರೆ.
Laxmi News 24×7