Breaking News

ಹುಬ್ಬಳ್ಳಿ | ಇಂಗ್ಲಿಷ್‌ ಮಾಧ್ಯಮ; ಶಿಕ್ಷಕರ ಕೊರತೆ

Spread the love

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಇನ್ನೂ ಆರು ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಇಲಾಖೆಯು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವವೂ ಸಲ್ಲಿಸಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದದಲ್ಲಿ ತಲಾ ಒಂದೊಂದು ಶಾಲೆ ಸೇರಿ ಒಟ್ಟು 8 ಕರ್ನಾಟಕ ಪಬ್ಲಿಕ್‌ ಶಾಲೆಗಳಿವೆ (ಕೆಪಿಎಸ್‌).

ಇಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಬೋಧಿಸಲಾಗುತ್ತದೆ.

‘ಪೋಷಕರು ಹಾಗೂ ವಲಯ ವ್ಯಾಪ್ತಿಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಡಿಕೆಯಂತೆ 2024-25ನೇ ಸಾಲಿನಲ್ಲಿ ಜಿಲ್ಲೆಯ ಹುಬ್ಬಳ್ಳಿ ಶಹರ, ಹುಬ್ಬಳ್ಳಿ ಗ್ರಾಮೀಣ ಮತ್ತು ಕಲಘಟಗಿ ಭಾಗದಲ್ಲಿ ಹೆಚ್ಚುವರಿಯಾಗಿ ಇನ್ನೂ 6 ಇಂಗ್ಲಿಷ್‌ ಮಾಧ್ಯಮದ ಶಾಲೆಗಳ ಅವಶ್ಯವಿದ್ದು, ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎನ್ನುತ್ತಾರೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಎಸ್‌.ಎಸ್‌.ಕೆಳದಿಮಠ.

‘ಸರ್ಕಾರದ ಸೂಚನೆಯಂತೆ ಸಿಎಸ್‌ಆರ್‌ ಅನುದಾನದಡಿಯಲ್ಲಿ ಜಿಲ್ಲೆಯ ಕೆಲ ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಮಕ್ಕಳಿಗೆ ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮದಲ್ಲಿ ಬೋಧನೆ ಮಾಡಲು ಅನುಕೂಲವಾಗುವಂತಹ 18 ಶಾಲೆಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಈ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಕೆಪಿಎಸ್‌ ಮಾದರಿಯಲ್ಲಿ ಶಾಲೆಗಳಾಗಿ ಪರಿವರ್ತಿಸಬಹುದು ಎಂಬ ಪ್ರಸ್ತಾಪವನ್ನೂ ಸಲ್ಲಿಸಲಾಗಿದೆ’ ಎನ್ನುತ್ತಾರೆ ಅವರು.

ಇಂಗ್ಲಿಷ್‌ ಮಾಧ್ಯಮಕ್ಕೆ ಬೇಡಿಕೆ:

‘ಇಂಗ್ಲಿಷ್‌ ಮಾಧ್ಯಮದ ಶಾಲೆಗಳಿಗೆ ಬೇಡಿಕೆ ಇದೆ. ಆದರೆ, ಕನ್ನಡ ಭಾಷೆಗೂ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಒಂದೇ ಶಾಲೆಯ ಆವರಣದಲ್ಲಿ ಎರಡೂ ಮಾಧ್ಯಮದ ಶಾಲೆಗಳನ್ನು ಆರಂಭಿಸುವ ಚಿಂತನೆ ಸರ್ಕಾರಕ್ಕಿದೆ’ ಎನ್ನುತ್ತಾರೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ