Breaking News

ಬೈಂದೂರು: ಕುಸಿಯುತ್ತಿದೆ ಸೋಮೇಶ್ವರ ಗುಡ್ಡ

Spread the love

ಬೈಂದೂರು: ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡದಲ್ಲಿ ಖಾಸಗಿ ಕಟ್ಟಡಕ್ಕೆ ರಸ್ತೆ ನಿರ್ಮಿಸಿದ ಪರಿಣಾಮ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ನಿರಂತರ ಸುರಿಯುತ್ತಿರುವ ಮಳೆಯ ಅಬ್ಬರದ ಪರಿಣಾಮವಾಗಿ ಸೊಮೇಶ್ವರ-ದೊಂಬೆ ರಸ್ತೆಗೆ ಮಣ್ಣು ಕುಸಿಯುತ್ತಿದೆ ಎಂದು ಸಾರ್ವಜನಿಕರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.

 

ಗುಡ್ಡವು ಯಾವುದೇ ಕ್ಷಣದಲ್ಲೂ ಕುಸಿಯುವ ಸಾಧ್ಯತೆ ಇದ್ದು, ಒಂದೊಮ್ಮೆ ಕುಸಿದರೆ ರಸ್ತೆಯ ಇನ್ನೊಂದು ಪಾರ್ಶ್ವದ ಗುಡ್ಡವು ಸೋಮೇಶ್ವರ ದೇವಾಲಯದ ಆವರಣ, ಕೆರೆ ಹಾಗೂ ಸುತ್ತಮುತ್ತ ಜರಿದು ಬೀಳಲಿದೆ ಎಂದಿದ್ದಾರೆ.

ಬೈಂದೂರು: ಕುಸಿಯುತ್ತಿದೆ ಸೋಮೇಶ್ವರ ಗುಡ್ಡ

ಪಟ್ಟಣ ಪಂಚಾಯತ್ ನಿರ್ಲಕ್ಷ್ಯ : ಶೇಡಿ ಮಣ್ಣಿನ ಈ ಗುಡ್ಡದಲ್ಲಿ ಹಲವಾರು ತಿಂಗಳುಗಳಿಂದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಮಳೆಯಲ್ಲಿ ಗುಡ್ಡ ಜರಿದು ಮಣ್ಣು ಕುಸಿಯುತ್ತಿದೆ. ಮಳೆ ಮುಂದುವರಿದರೆ ಗುಡ್ಡದ ಒಂದು ಪಾರ್ಶ್ವ ಸಂಪೂರ್ಣ ಕುಸಿಯುವ ಸಾಧ್ಯತೆಯಿದೆ. ನಿತ್ಯ ಶಾಲಾ ವಾಹನ ಸೇರಿದಂತೆ ನೂರಾರು ವಾಹನ ಈ ರಸ್ತೆಯಲ್ಲಿ ಸಂಚರಿಸುತ್ತಿರುತ್ತದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಪಟ್ಟಣ ಪಂಚಾಯಿತಿ ಗಮನಹರಿಸಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ.

ಗುಡ್ಡ ಕೊರೆದು ರಸ್ತೆ ನಿರ್ಮಿಸಲು ಅಧಿಕಾರಿಗಳು ಅನುಮತಿ ಹೇಗೆ ನೀಡಿದರು. ಈ ಕುರಿತು ಎರಡು ವರ್ಷದಿಂದ ದೂರು ನೀಡುತ್ತಿದ್ದೇವೆ ಆದರೆ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕ್ರಮಗೊಂಡಿಲ್ಲ. ಗುಡ್ಡ ಕುಸಿತಕ್ಕೆ ಪಟ್ಟಣ ಪಂಚಾಯಿತಿ ನೇರ ಹೊಣೆ ಎಂದೂ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳಿಗೆ ತರಾಟೆ: ಗುಡ್ಡ ಕುಸಿಯುತ್ತಿರುವ ಮಾಹಿತಿ ತಿಳಿದು ಕಂದಾಯ, ಪೊಲೀಸ್‌ ಹಾಗೂ ಇತರ ಅಧಿಕಾರಿಗಳು ಬುಧವಾರ ಸ್ಥಳಕ್ಕಾಗಮಿಸಿದರು. ಕುಸಿಯುವ ಭೀತಿ ಇರುವುದರಿಂದ ದೊಂಬೆ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲು ಮುಂದಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು, ನಿತ್ಯ ಸುತ್ತು ಬಳಸಿ ಬರಲು ಸಾಧ್ಯವಿಲ್ಲ. ಮೊದಲು ಗುಡ್ಡ ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ