Breaking News

ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆ ಪಕ್ಕದ ಅಕ್ರಮ ಕಟ್ಟಡ ತೆರವು

Spread the love

ಪುಣೆ: ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಐಷಾರಾಮಿ ಮನೆಯ ಪಕ್ಕದಲ್ಲಿದ್ದ ಅಕ್ರಮ ಕಟ್ಟಡವನ್ನು ಪುಣೆ ಮಹಾನಗರ ಪಾಲಿಕೆಯು ಬುಧವಾರ ತೆರವುಗೊಳಿಸಿದೆ.

ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡ ತೆರವುಗೊಳಿಸುವಂತೆ ವಿವಾದಿತ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಕುಟುಂಬಕ್ಕೆ ಸೂಚಿಸಿ, ಜುಲೈ 13ರಂದು ನೋಟಿಸ್ ನೀಡಲಾಗಿತ್ತು.

ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆ ಪಕ್ಕದ ಅಕ್ರಮ ಕಟ್ಟಡ ತೆರವು

ಈ ಕುರಿತು ಬುಧವಾರ ಪ್ರತಿಕ್ರಿಯಿಸಿದ ಪುಣೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು, ‘ಏಳು ದಿನಗಳಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿ ಅವರ ಕುಟುಂಬಕ್ಕೆ (ಖೇಡ್ಕರ್) ಸೂಚಿಸಲಾಗಿತ್ತು. ಒಂದು ವೇಳೆ ವಿಫಲವಾದಲ್ಲಿ, ಪುಣೆ ಮಹಾನಗರವೇ ಅದನ್ನು ತೆರವುಗೊಳಿಸಲಿದೆ. ಅದಕ್ಕೆ ತಗುಲುವ ವೆಚ್ಚವನ್ನು ಅವರಿಂದ ಭರಿಸಲಾಗುವುದು ಎಂಬುದಾಗಿ ನೋಟಿಸ್‌ನಲ್ಲಿ ತಿಳಿಸಲಾಗಿತ್ತು’ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ