Breaking News

ಪ್ರಾಧಿಕಾರ ವಿರುದ್ಧ ಎಫ್‌ಐಆರ್‌: ಕೃಷ್ಣ ಬೈರೇಗೌಡ

Spread the love

ಬೆಂಗಳೂರು: ಅಂಕೋಲಾದ ಶಿರೂರಿನ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ( ಎನ್‌ಎಚ್‌ಎ) ಬೇಜವಾಬ್ದಾರಿಯೇ ಕಾರಣ’ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಾಧಿಕಾರ ಮತ್ತು ಐಆರ್‌ಬಿ ಕಂಪೆನಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ತಿಳಿಸಿದರು.

National Highway ಪ್ರಾಧಿಕಾರ ವಿರುದ್ಧ ಎಫ್‌ಐಆರ್‌: ಕೃಷ್ಣ ಬೈರೇಗೌಡ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿತ ಆಗಬಹುದು ಎಂಬ ಬಗ್ಗೆ ಕಳೆದ ವರ್ಷವೇ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಿಲ್ಲ. ಬುಧವಾರವೂ ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸಲಿಲ್ಲ. ರಾಷ್ಟ್ರೀಯ ಹೆದ್ದಾರಿಯವರು ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸ್ಥಳೀಯ ಶಾಸಕರು ದೂರು ನೀಡಿದ್ದಾರೆ.

ಬುಧವಾರ ಸಂಜೆ ಐಆರ್‌ಬಿ ಕಂಪೆನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದೇವೆ. ಈ ಪ್ರಕರಣಕ್ಕೆ ಅವರ ಬೇಜವಾಬ್ದಾರಿ, ಮೊಂಡುತನ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ