ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾಗಿರುವ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.