Breaking News

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಲಕ್ಷ್ಮೀ ಹೆಬ್ಬಾಳಕರ್‌

Spread the love

ಬೆಂಗಳೂರು, ಜುಲೈ 19: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಮಹತ್ವದ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್‌

ವಿಧಾನ ಪರಿಷತ್‌ ಕಲಾಪದಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್‌ ಜಬ್ಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ ಎಂದರು. ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು, ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದರು


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ