Breaking News

ಅನ್ಮೋದ್ ಘಾಟ್‍ನಲ್ಲಿ ಭಾರಿ ಭೂಕುಸಿತ

Spread the love

ಣಜಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ದೂಧ್ ಸಾಗರ ದೇವಸ್ಥಾನದ ಸಮೀಪವಿರುವ ಅನ್ಮೋದ್ ಘಾಟ್‍ನಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿದೆ. ಇಡೀ ರಸ್ತೆಯಲ್ಲಿ ಮಣ್ಣು ಹರಡಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.Panaji: ಅನ್ಮೋದ್ ಘಾಟ್‍ನಲ್ಲಿ ಭಾರಿ ಭೂಕುಸಿತ. ವಾಹನ ಸಂಚಾರ ಸ್ಥಗಿತ

ಅನಮೋಡ ಘಾಟ್ ರಸ್ತೆಯು ಗೋವಾ ಮತ್ತು ಬೆಳಗಾವಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ.

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಸದ್ಯ ಅನ್ಮೋದ್ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತದಿಂದಾಗಿ ಈ ಮಾರ್ಗವನ್ನು ತಾತ್ಕಾಲಿಕವಾಗಿ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ಬಂದ್ ಆಗಿರುವುದರಿಂದ ವಾಹನಗಳ ಸಂಚಾರ ಕಡಿಮೆಯಾಗಿದೆ. ಹೀಗಾಗಿ ವಾಹನ ಸಂಚಾರಕ್ಕೆ ಹೆಚ್ಚಿನ ತೊಂದರೆಯಾಗಿಲ್ಲ. ಸದ್ಯ ಬೆಳಗಾವಿ ಮಾರ್ಗಕ್ಕೆ ತೆರಳುವ ಹೆಚ್ಚಿನ ವಾಹನಗಳು ಚೋರ್ಲಾ ಘಾಟ್ ಮಾರ್ಗವಾಗಿ ಸಂಚರಿಸುತ್ತಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ