Breaking News

ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ

Spread the love

ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ.

 

ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ದಂಡಕ್ಕೆ ಏರಿಕೆ ಆದೇಶಿಸಿದೆ. ಹಾಗೂ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಹೇಳಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ