Breaking News

ಖಾನಾಪುರ | ಮುಂದುವರಿದ ಮಳೆ: ಪ್ರವಾಹ ಪರಿಸ್ಥಿತಿ

Spread the love

ಖಾನಾಪುರ: ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಳೆರಾಯನ ಅಬ್ಬರ ಮುಂದುವರೆದಿದೆ. ಗುರುವಾರ ಇಡೀ ರಾತ್ರಿ ಮತ್ತು ಶುಕ್ರವಾರ ಇಡೀ ದಿನ ಪಟ್ಟಣ ಸೇರಿದಂತೆ ತಾಲ್ಲೂಕಿನ ಲೋಂಡಾ, ಕಣಕುಂಬಿ, ಹೆಮ್ಮಡಗಾ, ಜಾಂಬೋಟಿ, ಶಿರೋಲಿ, ಗುಂಜಿ ಅರಣ್ಯದಲ್ಲಿ ಧಾರಾಕಾರ ಮಳೆ ಸುರಿದಿದೆ.

ಗುರುವಾರ ಮುಳುಗಿದ್ದ ಸೇತುವೆಗಳು ಶುಕ್ರವಾರವೂ ಸಂಚಾರಕ್ಕೆ ತೆರೆದುಕೊಳ್ಳಲಿಲ್ಲ. ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇಟಗಿ, ಗಂದಿಗವಾಡ, ಬೀಡಿ, ಪಾರಿಶ್ವಾಡ, ದೇವಲತ್ತಿ ಸುತ್ತಮುತ್ತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದ್ದು, ತಾಲ್ಲೂಕಿನಾದ್ಯಂತ ಮೋಡ ಮುಸುಕಿದ ಶೀತ ವಾತಾವರಣ ಮುಂದುವರೆದಿದೆ.

ಅರಣ್ಯಪ್ರದೇಶದಲ್ಲಿ ಸತತಧಾರೆಯ ಪರಿಣಾಮ ಕಾನನವಾಸಿಗಳ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾನನದಂಚಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ನೀರಿನ ಹರಿವು ಶುಕ್ರವಾರವೂ ಮುಂದುವರೆದಿದೆ.

ಮಲಪ್ರಭಾ, ಮಹದಾಯಿ, ಪಾಂಡರಿ ನದಿಗಳು ಮತ್ತು ನದಿಗಳನ್ನು ಸಂಗಮಿಸುವ ಹಳ್ಳಕೊಳ್ಳಗಳಲ್ಲಿ ಪ್ರವಾಹ ಪರಿಸ್ಥಿತಿ ಯಥಾಸ್ಥಿತಿ ಮುಂದುವರೆದಿದೆ. 30ಕ್ಕೂ ಹೆಚ್ಚು ಸೇತುವೆಗಳ ಮೇಲೆ ಹಲವು ಅಡಿಗಳಷ್ಟು ನೀರು ಹರಿಯುತ್ತಿದ್ದು, ಈ ಸೇತುವೆಗಳ ಮೂಲಕ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ