ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಗುರುವಾರ ನಡೆದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಹಾಗೂ 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಚಿಕ್ಕಬಳ್ಳಾಪುರದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸದ್ಗುರು ಮಧುಸೂದನ್ ಸಾಯಿ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ.ಮರಾರ್ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪ್ರದಾನ ಮಾಡಿದರು.ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಎಂ.ಎಸ್.ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಸಾಹಿಲ್ ಸೋಮನಾಚೆ 12 ಚಿನ್ನದ ಪದಕ ಪಡೆದರು. ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಜಿ.ವಿಷ್ಣುಪ್ರಿಯಾ 10, ಎಸ್‌ಜೆಬಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ಸ್ ವಿಭಾಗದ ಜಿ.ರೇಷ್ಮಾ, ಇದೇ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಎಲ್.ಮೋಹನಕುಮಾರ್, ಬಳ್ಳಾರಿಯ ಬಳ್ಳಾರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ಜಿ.ಹೃತಿಕಾ ಅವರು ತಲಾ 7 ಚಿನ್ನದ ಪದಕ ಪಡೆದರು.