Breaking News

ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ

Spread the love

ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಿರೆ. ಬಳಿಕ ಎರಡನೆ ಹಂತದ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸುತ್ತಿದ್ದು, ಈ ವೇಳೆ ಆಯಾ ರಾಜ್ಯಗಳ ಕೋವಿಡ್ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಭೆಗೂ ಮುನ್ನ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿ ನಡೆಸಲಿರುವ ಈ ಸಭೆಯಲ್ಲಿ ಐತಿಹಾಸಿಕ ನಿರ್ಧಾರದ ಘೋಷಣೆಯಾಗುವ ನಿರೀಕ್ಷೆಯಿದೆ. ಕೋವಿಡ್ ಸೋಂಕಿತರಿಗೆ ಸೌಲಭ್ಯ, ಕೊರೊನಾ ಲಸಿಕೆ ಬಗ್ಗೆ ಸಿಹಿಸುದ್ದಿ ಪ್ರಕಟವಾಗುವ ಸಾಧ್ಯತೆಯಿದೆ. ನಾವೆಲ್ಲರೂ ಪ್ರಧಾನಿ ಮೋದಿ ಘೋಷಣೆ ಬಗ್ಗೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ