ಬೆಳಗಾವಿ : ವ್ಯಕ್ತಿಯನ್ನು ಆಸ್ತಿ ವಿಚಾರವಾಗಿ ಕೊಲೆ ಮಾಡಿ ನಂತರ ಅಪಘಾತ ಎಂದು ಬಿಂಬಿಸಿದ್ದ ಪ್ರಕರಣವನ್ನು ಭೇದಿಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ನಿವಾಸಿ ಮಾಣಿಕ ಕೇಶವ ಕದಮ್ ( 50 ) ರಸ್ತೆ ಮೇಲೆ ಸಂಚರಿಸುವ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ನಡೆದಿತ್ತು.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಬೆನ್ನು ಬಿದ್ದ ಪೊಲೀಸರಿಗೆ ಇದು ಅಪಘಾತ ಅಲ್ಲ. ಕೊಲೆ ಎಂಬುದು ತಿಳಿದ ಹಿನ್ನಲೆಯಲ್ಲಿ ತನಿಖೆ ನಡೆಸಿದ್ದಾರೆ.
ಕೊಲೆ ಶಂಕಿತ ಆರೋಪಿಗಳಾಗಿ. ಶಂಬರಗಿ ಗ್ರಾಮದ ಭರಮಣ್ಣ ಸೊದ್ದಿ, ಲಕ್ಷ್ಮಣ ಸೊದ್ದಿ, ರಾಮ ಸೊದ್ದಿ, ಅನಿಲ ಕಂಟೆಕರ್ , ಶುಭಾಶ ಸಿಂಗಾಡೆ ಎಂಬ ಐವರನ್ನು ಬಂಧಿಸಿದ್ದಾರೆ.
Laxmi News 24×7