ಸತ್ತಿಗೇರಿ: ಸ್ಥಳೀಯ ರೈತರ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಭೇಟಿ ನೀಡಿ ವಿವಿಧ ಬೆಳೆಗಳನ್ನು ವೀಕ್ಷಿಸಿದವರು.
‘ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ ಕಾರಣ ಹೆಸರು, ಗೋವಿನ ಜೋಳ, ಹತ್ತಿ ಬೆಳೆಗಳು ಉತ್ತಮ ಸ್ಥಿತಿಯಲ್ಲಿವೆ. ಅಲ್ಲಲ್ಲಿ ರೋಗ ಮತ್ತು ಕೀಟ ಬಾಧೆ ಕ್ಷೇತ್ರಗಳಿಗೆ ಭೇಟಿ ನೀಡಿ ಹತೋಟಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.
ರೈತರು ಆದಷ್ಟು ಅಂತರ ಬೆಳೆ ಮತ್ತು ಮಿಶ್ರ ಬೆಳೆ ಮೊರೆ ಹೋಗಬೇಕು. ಹೊಲಗಳಿಗೆ ಹೋಗಿ ಬೆಳೆಗಳ ಪರಿಸ್ಥಿತಿ ಆಧಾರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ಸಂಪರ್ಕ ಮಾಡಿ ಬೆಳೆ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಕೃಷಿ ಅಧಿಕಾರಿ ಎಂ.ಜಿ. ಕಳಸಪ್ಪನವರ, ‘ಆತ್ಮ’ ಸಿಬ್ಬಂದಿ ಉಮೇಶ ಯರಗಟ್ಟಿ ಹಾಗೂ ಕೃಷಿ ಸಂಜೀವಿನಿ ಸಿಬ್ಬಂದಿ ವರ್ಗದವರು ರೈತರು ಇದ್ದರು.
Laxmi News 24×7