Breaking News

ಬಾರದ ʼಗೃಹಲಕ್ಷ್ಮಿʼ ಹಣ, ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!

Spread the love

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಅದರಂತೆ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿತ್ತು.

ಆದರೆ ಈ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಉತ್ತಮವಾಗಿಯೇ ಜಾರಿಯಾಗಿದ್ದವು.Gruha Lakshmi Scheme: ಬಾರದ ʼಗೃಹಲಕ್ಷ್ಮಿʼ ಹಣ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!

ಲಕ್ಷಾಂತರ ಜನ ಮಹಿಳೆಯರು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಅನ್ನಭಾಗ್ಯ ಹಾಗೂ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಂಡಿದ್ದರು.

ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಂಡರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಕೈಕೊಟ್ಟಿದ್ದರು.

ಇದೇ ಕಾರಣಕ್ಕೂ ಏನೋ ಲೋಕಸಭಾ ಚುನಾವಣೆ ಬಳಿಕ ಮನೆಯ ಯಜಮಾನಿಯರ ಖಾತೆಗೆ 2 ಸಾವಿರ ರೂ. ಗೃಹಲಕ್ಷ್ಮಿ ಹಣ ಬಂದಿಲ್ಲ.

ಹೀಗಾಗಿ ಪ್ರತಿದಿನವೂ ಹಣ ಬರದ ಮಹಿಳೆಯರು ಬ್ಯಾಂಕಿಗೆ ಎಡತಾಕುವಂತಾಗಿದೆ. ಇಂದು ಬರುತ್ತೆ, ನಾಳೆ ಬರುತ್ತೆ ಅಂತಾ ಲಕ್ಷಾಂತರ ಮಹಿಳೆಯರು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ