Breaking News

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Spread the love

ಬೆಂಗಳೂರು: ಮೈಸೂರು ರಸ್ತೆಯ ಬಿಜಿಎಸ್‌ ಮೇಲು ಸೇತುವೆಯ ಡೌನ್‌ ರ್‍ಯಾಂಪ್‌ನಲ್ಲಿ ಬೈಕ್‌ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ವಾಲ್ಮೀಕಿನಗರದ ವಿಘ್ನೇಶ್ (26) ಮೃತ ಸವಾರ.

ಕೆಂಗೇರಿಯ ಶ್ರೀನಿಧಿ ಗಾಯಗೊಂಡಿರುವ ಹಿಂಬದಿ ಸವಾರ.

ಸದ್ಯ ಶ್ರೀನಿಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭಾನುವಾರ ಮುಂಜಾನೆ ಸುಮಾರು 1.30ಕ್ಕೆ ಬಿಜಿಎಸ್‌ ಮೇಲು ಸೇತುವೆಯಲ್ಲಿ ಡೌನ್‌ ರ್‍ಯಾಂಪ್‌ನಲ್ಲಿ ಸಿಟಿ ಮಾರ್ಕೆಟ್‌ ಕಡೆಯಿಂದ ಕೆಂಗೇರಿ ಕಡೆಗೆ ಹೋಗುವಾಗ ಈ ಘಟನೆ ನಡೆದಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಮೃತ ಸವಾರ ವಿಘ್ನೇಶ್ ಹಾಗೂ ಈತನ ಸ್ನೇಹಿತ ಶ್ರೀನಿಧಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ