Breaking News

25 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

Spread the love

ಕೌಜಲಗಿ: ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟಾರೆ ₹25 ಕೋಟಿ ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.

ಕೌಜಲಗಿ: ₹25 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ

ಸಮೀಪದ ಮನ್ನಿಕೇರಿ ಗ್ರಾಮದ ಹತ್ತಿರ ಭಾನುವಾರ ಜರುಗಿದ ಲೋಕೋಪಯೋಗಿ ಇಲಾಖೆಯ ಎಸ್‌ಎಚ್‌ಡಿಪಿ 5ನೇ ಹಂತದ ಯೋಜನೆಯ ₹13 ಕೋಟಿ ವೆಚ್ಚದ ಬೆಟಗೇರಿ-ಬಗರನಾಳ-ಮನ್ನಿಕೇರಿ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿ ಮತ್ತು 12 ಕೋಟಿ ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾಜ್ಯ ಹೆದ್ದಾರಿ-134ರ ಮನ್ನಿಕೇರಿಯಿಂದ ಕೌಜಲಗಿ ವರೆಗಿನ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ಭಾಗದ ಜನ ಮೆಚ್ಚಿನ ಶಾಸಕರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಈ ಎರಡೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ₹25 ಕೋಟಿ ಬಿಡುಗಡೆಗೊಂಡಿದೆ ಎಂದರು.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ