Breaking News

ಅಕ್ರಮ ಸಂಬಂಧ ಶಂಕೆ: ಯುವಕನ ಕೊಲೆ

Spread the love

ಮೂಡಲಗಿ: ತಾಲ್ಲೂಕಿನ ಲಕ್ಷ್ಮೇಶ್ವರ ಕ್ರಾಸ್‌ ಬಳಿ ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ.

ಲಕ್ಷ್ಮೇಶ್ವರದ ಮೌಲಾಸಾಬ್‌ ಯಾಸೀನ್‌ ಮೋಮಿನ್‌(22) ಮೃತರು.

‘ತನ್ನ ಪತ್ನಿ ಶಿಲ್ಪಾ ಅವರೊಂದಿಗೆ ಮೌಲಾಸಾಬ್‌ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿ, ಸುಣಧೋಳಿಯ ಅಮೋಘ ಢವಳೇಶ್ವರ ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ | ಅಕ್ರಮ ಸಂಬಂಧ ಶಂಕೆ: ಯುವಕನ ಕೊಲೆ

ಮೌಲಾಸಾಬ್‌ ಹಾಗೂ ಶಿಲ್ಪಾ ಬೈಕ್‌ ಮೇಲೆ ಹೊರಟಿದ್ದರು. ಅವರನ್ನು ತಡೆದ ಆರೋಪಿ, ಮಾರಕಾಸ್ತ್ರದಿಂದ ಇಬ್ಬರ ಮೇಲೂ ಹಲ್ಲೆ ಮಾಡಿದ. ಮೌಲಾಸಾಬ್‌ ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡ ಶಿಲ್ಪಾ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿವೈಎಸ್ಪಿ ಡಿ.ಎಚ್.ಮುಲ್ಲಾ, ಸಿಪಿಐ ಶ್ರೀಶೈಲ ಬ್ಯಾಕೂಡ ಭೇಟಿ ನೀಡಿ ಪರಿಶೀಲಿಸಿದರು.

ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ