ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು
ಕನಕಪುರ: ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದೆ.
ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ಅನೀಶ್ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಮಾವ, ಪಿಎಲ್‌ಡಿ ಬ್ಯಾಂಕ್ ಉದ್ಯೋಗಿ ಲಕ್ಷ್ಮಣ್ ಹಾಗೂ ಗೋವಿಂದರಾಜು ಕನಕಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರು ಸೇರಿದಂತೆ ಏಳು ಮಂದಿ ಮೇಲೆ ಗುಂಪು ಹಲ್ಲೆ ನಡೆಸಿದೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಆಟೊಗಳನ್ನು ಜಖಂಗೊಳಿಸಿದೆ.
ಒಕ್ಕಲಿಗ ಸಮುದಾಯದ ಹರ್ಷ ಅಲಿಯಾಸ್ ಕೈಮ, ಕರುಣೇಶ, ರಾಹುಲ್, ಶಿವ, ಶಶಾಂಕ, ಸುಬ್ಬ, ದರ್ಶನ್ ಹಾಗೂ ಇತರರ ವಿರುದ್ಧ ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7