Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.

ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.

Spread the love

ಗೋಕಾಕ: ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.

ಗೋಕಾಕನ ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗೋಕಾಕ ಪದವಿ ಕಾಲೇಜಿಗೆ ಇವರೆಗೂ ಶಾಶ್ವತ ನೆಲೆ ಇಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 50 ರಿಂದ 60 ಕಾಲೇಜುಗಳಿಗೆ ಈವರೆಗೂ ಸ್ವಂತ ಕಟ್ಟಡವಿಲ್ಲ. ಮೊದಲು ಸ್ವಂತ ಜಮೀನನ್ನು ಗುರುತು ಮಾಡುವ ಮುಖಾಂತರ ಕೂಡಲೇ ಸರಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೆ ಸ್ವಇಚ್ಛೆಯಿಂದ ಬರುವ ವಿದ್ಯಾರ್ಥಿಗಳ ಅನುಕೂಲಕ್ಕೆ ಆಫ್‍ಲೈನ್ ಕ್ಲಾಸ್ ಶುರು ಮಾಡಿದ್ದೇವೆ. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ ಆನ್‍ಲೈನ್, ಆಫ್‍ಲೈನ್ ಕ್ಲಾಸ್ ಎರಡೂ ಆರಂಭಿಸಿದ್ದೇವೆ ಎಂದರು.

ಅಧಿವೇಶನಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಕೊರೋನ ಎಲ್ಲಾ ಕಡೆಗಳಲ್ಲಿ ಅತಿ ಹೆಚ್ಚಾಗಿರುವ ಕಾರಣ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.

ಡಿ.5ಕ್ಕೆ ಕರ್ನಾಟಕ ಬಂದ್ ಅವರ ಅವರ ಭಾವನೆಗೆ ಬಿಟ್ಟ ವಿಚಾರ ಈ ಕುರಿತು ನಾನು ಏನು ಹೇಳುವುದಿಲ್ಲ ಎಂದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಆಯ್ಕೆ ವಿಚಾರ ಹೈಕಮಾಂಡ್‍ಗೆ ಸಂಬಂಧಿಸಿದ್ದು ಎಂದು ಹೇಳಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ