ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ.
ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು ಮಾಡಿದ ಕೆಲವರು ಜೈಲಿಗೆ ಹೋದರೆ ಪಕ್ಷ ಸ್ವತ್ಛ ಆಗುತ್ತದೆ. ಎಷ್ಟೇ ಒಳ ಒಪ್ಪಂದ ಮಾಡಿದರೂ ಲಾಲು ಪ್ರಸಾದ್ ಯಾದವ್ ಜೈಲಿಗೆ ಹೋದರು. ಮೋದಿ ನೇತೃತ್ವದಲ್ಲಿ ನಮ್ಮ ಪಕ್ಷ ಸ್ವತ್ಛ ಆಗಬೇಕು. ನಮ್ಮಲ್ಲಿಯ ಕೆಲವು ಹುಳುಗಳು ಜೈಲಿಗೆ ಹೋಗಬೇಕು