Breaking News

ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Spread the love

ಬೆಳಗಾವಿ: ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿಯಲ್ಲಿ ನಡೆದಿದೆ.

ಹನುಮಂತ ಖೋತ (34) ಹಾಗೂ ಖಂಡೋಬಾ ಖೋತ (32) ಮೃತಪಟ್ಟ ದುರ್ದೈವಿಗಳು.

 

ಕಳೆದ ಹಲವಾರು ವರ್ಷಗಳಿಂದ ಈ ಇಬ್ಬರು ಸಹೋದರರ ನಡುವೆ ಜಮೀನು ವಿವಾದ ಇತ್ತು ಎನ್ನಲಾಗಿದೆ ಅಲ್ಲದೆ ವಿವಾದ ಬಗೆಹರಿಸಲು ರಾಜಿ ಸಂಧಾನ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ.

ಈ ನಡುವೆ ಮತ್ತೆ ಇಬ್ಬರು ಸಹೋದರರ ಮಧ್ಯೆ ಜಗಳ ನಡೆದು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡು ಗಂಭೀರ ಗಾಯಗೊಂಡಿದ್ದರು, ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಹೋದರರು ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ