Breaking News

COVID ಲಸಿಕೆ: ಸರಕಾರಕ್ಕೆ 250 ರೂ, ಖಾಸಗಿಗೆ 1000 ರೂ.ಗೆ ಮಾರಾಟ: ಸೆರಂ ಇನ್ಸ್ಟಿಟ್ಯೂಟ್ Nov, 24 2020

Spread the love

ನವದೆಹಲಿ: ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ ಭಾರತಕ್ಕೆ ಲಸಿಕೆ ಪೂರೈಕೆ ಕುರಿತು ಖಾಸಗಿ ಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ, ಬ್ರಿಟನ್ ಮೂಲದ ಆಕ್ಸ್‍ಫರ್ಡ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-19 ‘ಕೋವಿಶೀಲ್ಡ್’ ಲಸಿಕೆಯು ಭರವಸೆದಾಯಕ ಫಲಿತಾಂಶ ನೀಡಿರುವುದಾಗಿ ಪ್ರಕಟಿಸಲಾಗಿದ್ದು, ಇದರ ಬೆನ್ನಲ್ಲೇ ಅವರು, ಆಸ್ಟ್ರಾ ಜೆನಿಕಾ ಸಂಸ್ಥೆಗೆ ಶುಭ ಕೋರಿದ್ದಾರೆ.

‘ಸಂಸ್ಥೆಯಲ್ಲಿ ತಯಾರಿಸಲಾಗುವ ಲಸಿಕೆಯ ಒಟ್ಟು ಪ್ರಮಾಣದಲ್ಲಿ ಶೇ 90ರಷ್ಟು ಡೋಸ್‍ಗಳು ಭಾರತ ಸರ್ಕಾರಕ್ಕೆ ಹೋಗಲಿವೆ ಹಾಗೂ ಬಹುಶಃ ಶೇ 10ರಷ್ಟು ಡೋಸ್‍ಗಳು ಖಾಸಗಿ ಮಾರುಕಟ್ಟೆಗೆ ಮಾರಾಟವಾಗಲಿದೆ. ಖಾಸಗಿಯಾಗಿ ಪ್ರತಿ ಡೋಸ್‍ಗೆ ರೂ 1,000ಕ್ಕೆ ಮಾರಾಟ ಮಾಡಲಾಗುವುದು. ತುರ್ತು ಸಂದರ್ಭಗಳಲ್ಲಿ ಲಸಿಕೆ ಬಳಕೆಗೆ ಡಿಸೆಂಬರ್‍ನಲ್ಲಿ ಔಷಧ ಗುಣಮುಟ್ಟ ನಿಯಂತ್ರಣ ಸಂಸ್ಥೆಯಿಂದ ಅನುಮತಿ ದೊರೆತರೆ, ಜನವರಿಯಲ್ಲಿ ಲಸಿಕೆಯ ಡೋಸ್‍ಗಳನ್ನು ಬಿಡುಗಡೆ ಮಾಡಬಹುದಾಗಿದೆ’ ಎಂದು ಪೂನಾವಾಲ ಹೇಳಿದ್ದಾರೆ.

ಈಗಾಗಲೇ ಲಸಿಕೆಯ 4 ಕೋಟಿ ಡೋಸ್‍ಗಳನ್ನು ಸಿದ್ಧಪಡಿಸಲಾಗಿದೆ. ಜನವರಿ ವೇಳೆಗೆ ನಾವು 10 ಕೋಟಿ ಡೋಸ್‍ಗಳಷ್ಟು ಲಸಿಕೆ ತಯಾರಿಸಿರುತ್ತೇವೆ.’ ಸೆರಂ ಸಂಸ್ಥೆಯಲ್ಲಿ ತಯಾರಿಸಲಾಗುವ ಶೇ 90ರಷ್ಟು ಪ್ರಮಾಣದ ಲಸಿಕೆಯನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡುವ ನಿರೀಕ್ಷೆ ಇದೆ. ಪ್ರತಿ ಡೋಸ್ ಲಸಿಕೆಯನ್ನು ಸರ್ಕಾರಕ್ಕೆ 250 ರೂಪಾಯಿಗೆ (3 ಡಾಲರ್) ಮಾರಾಟ ಮಾಡಲಾಗುತ್ತದೆ. ಖಾಸಗಿ ಮಾರುಕಟ್ಟಗೆ ಈ ದರ ಪ್ರತೀ ಡೋಸ್ ಗೆ 1000 ರೂಗಳಾಗಿರುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ