Breaking News

ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

Spread the love

ಚೆನ್ನೈ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದ ಬೆನ್ನಲ್ಲೇ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ನಾಮನಿರ್ದೇಶನಗೊಂಡಿದ್ದು ಅತ್ತ ಹ್ಯಾರಿಸ್ ಹೆಸರು ಅಂತಿಮಗೊಳ್ಳುತ್ತಿದ್ದಂತೆ ಇತ್ತ ತಮಿಳುನಾಡಿನಲ್ಲಿ ಪೂರ್ವಜರ ಕುಟುಂಬದಿಂದ ಮುಂಬರುವ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ ಗೆಲುವು ಸಾಧಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

US Presidential Election: ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

ಅಂದಹಾಗೆ ಕಮಲಾ ಹ್ಯಾರಿಸ್ ತಾಯಿ ತಮಿಳುನಾಡು ಮೂಲದವರು ಹಾಗಾಗಿ ತಮಿಳುನಾಡಿನಲ್ಲಿ ಕಮಲಾ ಪೂರ್ವಜರು ಇಂದಿಗೂ ನೆಲೆಸಿದ್ದು ಅದರಂತೆ ಈ ವರ್ಷದ ಕೊನೆಯಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಗೆಲ್ಲಲೆಂದು ಇಲ್ಲಿನ ತುಳಸಿತೀರ್ಥಪುರಂ ಹಳ್ಳಿಯಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಡೊನಾಲ್ಡ್ ಟ್ರಂಪ್ ಸ್ಪರ್ಧಿಸಿದ್ದರೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಅಧ್ಯಕ್ಷ ಜೋ ಬೈಡನ್ ಹೆಸರು ಕೇಳಿ ಬಂದಿತ್ತು ಆದರೆ ಜೋ ಬೈಡನ್ ಉಮೇದುವಾರಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧವೂ ವ್ಯಕ್ತವಾಗಿತ್ತು. ಟ್ರಂಪ್ ಜೊತೆಗಿನ ಚರ್ಚೆಯಲ್ಲಿ ವಿಫಲವಾಗಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಈ ಎಲ್ಲ ಬೆಳವಣಿಗೆಯ ನಂತರ ಭಾನುವಾರ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ