ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ.
ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು” ಎಂದು ತಿಳಿಸಿದ್ದಾರೆ.