ಬಳ್ಳಾರಿ : ರೈತರು ಬೆಳೆ ವಿಮೆ ಯೋಜನೆಯಡಿ ತಮ್ಮ ಬೆಳೆಗಳನ್ನು ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು.
ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನ ಕಾಯಿ ಹಾಗೂ ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದೆ. ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ನೀರಾವರಿ ಬೆಳೆಗಳಾದ ಸಜ್ಜೆ, ತೊಗರಿ, ಭತ್ತ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ.