Breaking News

ಇಬ್ಬರು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

Spread the love

ಬೆಳಗಾವಿ: ಮೂಢನಂಬಿಕೆ ನಂಬಿ ತನ್ನ ಇಬ್ಬರು ಪುತ್ರಿಯರಿಗೆ ಫಿನಾಯಿಲ್‌ ಕುಡಿಸಿ ಕೊಂದಿದ್ದ ಅನಿಲ ಚಂದ್ರಕಾಂತ ಬಾಂದೇಕರ ಎಂಬ ಆರೋಪಿಗೆ ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಸೆಷೆನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ, ಮಂಗಳವಾರ ತೀರ್ಪು ಪ್ರಕಟಿಸಿದೆ.

ಬೆಳಗಾವಿ | ಇಬ್ಬರು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ತಾಲ್ಲೂಕಿನ ಕಂಗ್ರಾಳಿ ಕೆ.ಎಚ್ ಗ್ರಾಮದ ಅನಿಲ ಬಾಂದೇಕರ, ತನ್ನ ಮನೆ ಮಾರಾಟಕ್ಕೆ ಮುಂದಾಗಿದ್ದ. ಖರೀದಿಗೆ ಯಾರೂ ಬಾರದ್ದರಿಂದ ನೊಂದುಕೊಂಡಿದ್ದ. ತನ್ನ ಇಬ್ಬರು ಮಕ್ಕಳನ್ನು ಕೊಂದು, ತನ್ನ ರಕ್ತವನ್ನು ಶಿವಲಿಂಗಕ್ಕೆ ಹಾಕಿದರೆ ಮನೆ ಮಾರಾಟವಾಗುತ್ತದೆ. ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎಂದು ಕನಸು ಬೀಳುತ್ತಿತ್ತು. ಅದನ್ನು ನಂಬಿ ತನ್ನ ಪುತ್ರಿಯರಾದ ಅಂಜಲಿ(8) ಮತ್ತು ಅನನ್ಯ(4) ಅವರಿಗೆ 2021ರ ಜುಲೈ 14ರಂದು ಫಿನಾಯಿಲ್‌ ಕುಡಿಸಿ ಕೊಲೆ ಮಾಡಿದ್ದ. ನಂತರ ತನ್ನ ರಕ್ತವನ್ನು ಜಗಲಿಯಲ್ಲಿದ್ದ ಶಿವಲಿಂಗಕ್ಕೆ ಹಾಕಿದ್ದ. ಈ ಸಂಬಂಧ ಪತ್ನಿ ಜಯಾ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಿನ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ ಹಿರೇಮಠ ತನಿಖಾಧಿಕಾರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿ ನಿ ನೇಣು ಬಿಗಿದುಕೊಂಡ ಘಟನೆ ನಡೆದಿದೆ.

Spread the loveಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿಯೋರ್ವವಳು ಆತ್ಮಹ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸವದತ್ತಿ ಮೂಲದ ಪವಿತ್ರಾ ಎಂಬ ವಿಧ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ