Breaking News

ಮೇಕೆ ಮರಿ ರಕ್ಷಿಸಲು ಹೋಗಿ ಕುರಿಗಾಹಿ ನೀರುಪಾಲು!

Spread the love

ವಿಜಯಪುರ : ಕಾಲುವೆಗೆ ಬಿದ್ದಂತಹ ಮೇಕೆ ಮರಿಯನ್ನು ರಕ್ಷಿಸಲು ಕಾಲುವೆಗೆ ಜಿಗಿದ ಕುರಿಗಾರಿ ಒಬ್ಬ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ನಾಗಬೇನಾಳ ಬಳಿ ನಡೆದಿದೆ.

ನೀರುಪಾಲಾದ ಕುರಿಗಾಹಿಯನ್ನು ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ(28) ಎಂದು ಗುರುತಿಸಲಾಗಿದೆ.

ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್‌ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ.

ಆ ಮರಿಯನ್ನು ರಕ್ಷಣೆ ಮಾಡಲು ಮಂಜುನಾಥ ಕಾಲುವೆ ಜಿಗಿದಿದ್ದು, ಕುರಿ ಮರಿಯನ್ನು ರಕ್ಷಣೆ ಮಾಡಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಘಟನಾ ಸ್ಥಳದಲ್ಲಿ ಬಾಗೇವಾಡಿಯ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ಅಗ್ನಿಶಾಮಕ ದಳ ತಂಡದವರು ಕೂಡ ಆಗಮಿಸಿ ಮಂಜುನಾಥನ ಶುಭ ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ