Breaking News

ಶಿವಸೇನೆ ಶಾಸಕನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

Spread the love

ನವದೆಹಲಿ, ನ.24- ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧ ಅಕ್ರಮ ವಗಾರ್ವಣೆ ನಿರ್ಬಂಧಕ ಕಾಯ್ದೆಯನ್ವಯ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಸರ್ನಾಯಕ್ ಅವರಿಗೆ ಸೇರಿದ ಕಟ್ಟಡಗಳು , ವಾಣಿಜ್ಯ ಉದ್ಯಮಗಳು, ಬಿಲ್ಡರ್‍ಗಳು, ಅವರೊಂದಿಗೆ ಸಂಪರ್ಕವಿರಿಸಿಕೊಂಡಿರುವ ಪ್ರಮುಖರು ಹಾಗೂ ಕೆಲ ರಾಜಕೀಯ ಮುಖಂಡರುಗಳ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.ಮಹಾರಾಷ್ಟ್ರದ ಓವಾಲಾ-ಮೈಜ್ವಾಡ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಸುವ ಶಿವಸೇನೆ ಶಾಸಕ ಸರ್ನಾಯಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ