ಬೆಳಗಾವಿ : ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.