ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿರುವ ಕಾರಣ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶ್ರೀ ಸತೀಶ ಜಾರಕಿಹೊಳಿ ರವರು ರಾಯಬಾಗ ತಾಲೂಕಿನ ಕುಡಚಿ ಸೇತುವೆ,
ಹಳೆ-ದಿಗ್ಗೇವಾಡಿ ಮತ್ತಿತರ ಪ್ರವಾಹ ಪ್ರದೇಶಗಳ ವೀಕ್ಷಣೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪರೀಕ್ಷಾರ್ಥ ಐ.ಎ.ಎಸ್. ಅಧಿಕಾರಿ ಹಾಗೂ ಇತರೆ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ಹಾಜರಿದ್ದರು.
ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.