Breaking News

1500 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Spread the love

ಚಿಕ್ಕೋಡಿ: ‘ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಕ್ಷೇತ್ರದಲ್ಲಿ ಸದಾ ಕಾಲವೂ ಜನರ ಸಮಸ್ಯೆಗೆ ಸ್ಪಂದಿಸುತ್ತ ಜನರ ಹೃದಯದಲ್ಲಿ ನೆಲೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದು ಕ್ಷೇತ್ರದ ಜನರ ಹೆಮ್ಮೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಮಾ ಮಾನೆ ಹೇಳಿದರು.

1500 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಬುಧವಾರ ದು ಶಾಸಕ ಗಣೇಶ ಹುಕ್ಕೇರಿ ಅವರ 46ನೇ ಜನ್ಮದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

‘4 ದಶಕಗಳಿಂದ ಪ್ರಕಾಶ ಹುಕ್ಕೇರಿ ಹಾಗೂ 2 ದಶಕಗಳಿಂದ ಗಣೇಶ ಹುಕ್ಕೇರಿ ಅವರು ಕ್ಷೇತ್ರದ ಪ್ರತಿ ಗ್ರಾಮಗಳಲ್ಲೂ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಜನಾನುರಾಗಿಯಾಗಿದ್ದಾರೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲ ಪಾಟೀಲ, ‘ಇವರಿಬ್ಬರೂ ಕ್ಷೇತ್ರದ ಎರಡು ಕಣ್ಣುಗಳು ಇದ್ದಂತೆ. ಇವರಿಂದ ಕ್ಷೇತ್ರದ ಜನರ ನಿರೀಕ್ಷೆ ಸಾಕಷ್ಟು ಇವೆ’ ಎಂದರು.


Spread the love

About Laxminews 24x7

Check Also

8 ಮತಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ ಜಾರಕಿಹೊಳಿ

Spread the love ಯಮಕನಮರಡಿ: ‘ಮತಕ್ಷೇತ್ರದಲ್ಲಿ ಕಳೆದ 15ವರ್ಷದಲ್ಲಿ ನನ್ನ ತಂದೆ ಸತೀಶ ಜಾರಕಿಹೊಳಿ ಬಹಳಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ