ಪುಣೆ: ಅಗತ್ಯವೆನಿಸಿದರೆ ಪುಣೆಯಲ್ಲಿ ಮಳೆ ಸಂತ್ರಸ್ತರನ್ನು ವಾಯು ಮಾರ್ಗದ ಮೂಲಕ ಸ್ಥಳಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.
ಪುಣೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ.
ಮಳೆ ಸಂಬಂಧಿತ ಅವಘಡಗಳಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ
ಪುಣೆ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ನೆರೆಯ ಪಿಂಪ್ರಿ ಚಿಂಚ್ವಾಡ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಶಿಂದೆ, ಸ್ಥಳಾಂತರ ಕಾರ್ಯಗಳಿಗೆ ನೆರವಾಗುವಂತೆ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ (ಎನ್‌ಡಿಆರ್‌ಎಫ್) ಮನವಿ ಮಾಡಿದ್ದಾರೆ.
‘ಅಗತ್ಯಬಿದ್ದರೆ ಜನರನ್ನು ವಾಯು ಮಾರ್ಗವಾಗಿ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಚಿಂತಿಸುವ ಅಗತ್ಯವಿಲ್ಲ’ ಎಂದು ಶಿಂದೆ ಹೇಳಿದ್ದಾರೆ.
Laxmi News 24×7