Breaking News

ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಮಂಜೂರಾತಿ ಪಡೆದು ರೈತರಿಗೆ ನೀರಾವರಿ ಸೌಲಭ್:ಮಹಾಂತೇಶ ಕವಟಗಿಮಠ

Spread the love

ಚಿಕ್ಕೋಡಿ : ಕೃಷ್ಣಾ ನದಿಯ ಲಕ್ಷಾಂತರ ಕ್ಯೂಸೆಕ್ ಹರಿದು ಹೋಗುವ ನೀರನ್ನು ಬಳಕೆ ಮಾಡಿಕೊಂಡು ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಮಂಜೂರಾತಿ ಪಡೆದು ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ರಾಜ್ಯ ಬಿಜೆಪಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಪಾಂಗೀರೆ ಗ್ರಾಮದಲ್ಲಿ ಸೋಮವಾರ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.  ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಸರ್ಕಾರ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವತ್ತ ದಾಪುಗಾಲು ಇಟ್ಟಿದೆ ಎಂದರು.

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಪಯೋಗವಾಗಲು ಏತ ನೀರಾವರಿ ಯೋಜನೆ ರೂಪಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಮತ್ತು ಕುಡಚಿ ಭಾಗದಲ್ಲಿ 24 ಕೋಟಿ ರೂ ವೆಚ್ಚದಲ್ಲಿ 24 ಏತ ನೀರಾವರಿ ಯೋಜನೆಗಳಿಗೆ ಅನುದಾನ ಮಂಜೂರಾಗಿದೆ ಎಂದರು.

ಪಾಂಗೀರೆ ಗ್ರಾಮದ ಸುಭಾಷ ಕಾನಡೆ ಹಾಗೂ ಒಂಭತ್ತು ಜನ ರೈತರಿಗೆ ಅನುಕೂಲವಾಗಲು 45 ಲಕ್ಷ ವೆಚ್ಚದಲ್ಲಿ 28 ಎಕರೆ ಜಮೀನು ನೀರಾವರಿ ಯೋಜನೆಗೆ ಒಳಪಡಲಿದೆ. ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಲ್ಲಿ 49 ಲಕ್ಷ ವೆಚ್ಚದಲ್ಲಿ 45 ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಜಿಲ್ಲೆಯ 24 ನೀರಾವರಿ ಯೋಜನೆ ಮೂಲಕ 1500 ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. ಸರ್ಕಾರ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದೆ. ಸರ್ಕಾರದ ಸೌಲಭ್ಯಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಾಳಕೃಷ್ಣಾ ಕಾನಡೆ, ಇಂದುರಾವ ಪಾಟೀಲ, ಸಂತೋಷ ಪಾಟೀಲ, ವಿವೇಕ ಶಿತೋಳೆ, ಕಿರಣ ಶಿತೋಳೆ, ಸಾಗರ ಶಿಂಧೆ, ಪ್ರಸಾದ ಪರೀಟ ಮುಂತಾದವರು ಇದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ