Breaking News

ಖಾನಾಪುರ ತಾಲ್ಲೂಕಿನಲ್ಲಿ ಮುಂದುವರೆದ ಮಳೆ: ಜನಜೀವನ ಅಸ್ತವ್ಯಸ್ತ

Spread the love

ಖಾನಾಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರವೂ ಮಳೆ ಮುಂದುವರೆದಿದ್ದು, ತಾಲ್ಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ.

ತಾಲ್ಲೂಕಿನಾದ್ಯಂತ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ಪ್ರವಾಹೋಪಾದಿಯಲ್ಲಿ ನೀರು ಹರಿಯುತ್ತಿದೆ.

ಖಾನಾಪುರ ತಾಲ್ಲೂಕಿನಲ್ಲಿ ಮುಂದುವರೆದ ಮಳೆ: ಜನಜೀವನ ಅಸ್ತವ್ಯಸ್ತ

ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ನೀಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಯ ಸೇತುವೆಯ, ಸಿಂಧನೂರು-ಹೆಮ್ಮಡಗಾ ಮಾರ್ಗದ ಅಲಾತ್ರಿ ಹಳ್ಳದ ಸೇತುವೆ, ದೇವಾಚಿಹಟ್ಟಿ-ಜಾಂಬೋಟಿ ಮಾರ್ಗಗಳ ಸೇತುವೆ ಸೇರಿದಂತೆ ನೇರಸಾ-ಗವ್ವಾಳಿ, ಹೆಮ್ಮಡಗಾ-ತಳೇವಾಡಿ, ಚಿಕಲೆ-ಅಮಗಾಂವ, ಮೋದೆಕೊಪ್ಪ-ತೀರ್ಥಕುಂಡೆ, ದೇವಾಚಿಹಟ್ಟಿ-ತೋರಾಳಿ, ತಿವೋಲಿ-ಶಿರೋಲಿ, ಅಮಟೆ-ಗೋಲ್ಯಾಳಿ, ಹೆಮ್ಮಡಗಾ-ದೇಗಾಂವ, ಚಿಕ್ಕಹಟ್ಟಿಹೊಳಿ-ಚಿಕ್ಕಮುನವಳ್ಳಿ, ಯಡೋಗಾ-ಚಾಪಗಾಂವ, ಮಾಚಾಳಿ-ಲೋಂಡಾ ಗ್ರಾಮಗಳ ನಡುವಿನ ಸಂಪರ್ಕ ಸೇತುವೆಗಳ ಮೇಲೆ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ