Breaking News

ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Spread the love

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಶನಿವಾರದವರೆಗೆ ರಜೆ ವಿಸ್ತರಿಸಲಾಗಿದೆ‌.

ಜು.25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು.

ಆದರೆ ಮಳೆ ಮುಂದುವರೆದ ಪರಿಣಾಮ ರಜೆ ವಿಸ್ತರಿಸಿದ್ದು, ಜು.27 ರಂದು ರಜೆ ಘೋಷಿಸಲಾಗಿದೆ‌.ಈ ಕುರಿತಂತೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.

ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಬೆಳಗಾವಿಯಲ್ಲೂ ರಜೆ ಘೋಷಣೆ: ರಾಮದುರ್ಗ ತಾಲೂಕು ವ್ಯಾಪ್ತಿಯಲ್ಲಿ ರಜೆ ಅನ್ವಯವಾಗುವುದಿಲ್ಲ…

ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜು.27 ರಂದು(ಶನಿವಾರ) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ‌ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಳೆಯು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.‌ ಮುಂಬರುವ ದಿನಗಳಲ್ಲಿ ಈ ರಜೆಯನ್ನು‌ ಸರಿದೂಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ