Breaking News

ಚಿಕ್ಕೋಡಿ | ತುಂಬಿದ ಜಲಾಶಯಗಳು: ನೀರಿನ ಹರಿವು ಹೆಚ್ಚಳ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯಿಂದ ರಾಜ್ಯಕ್ಕೆ 216220 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾದಲ್ಲಿ 19.8 ಸೆಂ.ಮೀ., 16.8 ಸೆಂ.ಮೀ., ಕಾಳಮ್ಮವಾಡಿಯಲ್ಲಿ 15 ಸೆಂ.ಮೀ., ಮಹಾಬಳೇಶ್ವರದಲ್ಲಿ 26.7 ಸೆಂ.ಮೀ., ನವಜಾದಲ್ಲಿ 17.2 ಸೆಂ.ಮೀ., ರಾಧಾನಗರಿಯಲ್ಲಿ 23.4 ಸೆಂ.ಮೀ., ಸಾಂಗಲಿಯಲ್ಲಿ 2.6 ಸೆಂ.ಮೀ., ಕೊಲ್ಹಾಪುರದಲ್ಲಿ 10.4 ಸೆಂ.ಮೀ.

ಚಿಕ್ಕೋಡಿ | ತುಂಬಿದ ಜಲಾಶಯಗಳು: ನೀರಿನ ಹರಿವು ಹೆಚ್ಚಳ

ನಷ್ಟು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಚಿಕ್ಕೋಡಿಯಲ್ಲಿ 5.2 ಸೆಂ.ಮೀ., ಅಂಕಲಿಯಲ್ಲಿ 4.2 ಸೆಂ.ಮೀ., ಸದಲಗಾದಲ್ಲಿ 5.7 ಸೆಂ.ಮೀ. ಮಳೆಯು ಶುಕ್ರವಾರ ದಾಖಲಾಗಿದೆ.

ಕೊಲ್ಹಾಪುರ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿರುವ ರಾಜಾಪುರೆ ಬ್ಯಾರೇಜಿನಿಂದ 177500 ಕ್ಯುಸೆಕ್, ದೂಧಗಂಗಾ ನದಿಗೆ ಕಲ್ಲೋಳ ಗ್ರಾಮದ ಬಳಿಯಲ್ಲಿ 38720 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಲ್ಲೋಳ-ಯಡೂರು ಬ್ಯಾರೇಜ್ ಬಳಿಯಲ್ಲಿ 216220 ಕ್ಯುಸೆಕ್ ನೀರು ಹರಿಯುತ್ತಿದೆ. ಹಿಪ್ಪರಗಿ ಬ್ಯಾರೇಜಿನ ಎಲ್ಲಾ 22 ಗೇಟ್ ಗಳಿಂದ 199210 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ