Breaking News

ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ

Spread the love

ನಿಪ್ಪಾಣಿ: ವೇದಗಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನವೇ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂಜೆಯವರೆಗೆ ಸುಮಾರು 40ಕ್ಕೂ ಅಧಿಕ ಕುಂಟುಂಬಗಳು ಜಾನುವಾರುಗಳ ಸಮೇತ ಸ್ಥಳಾಂತರಣೆ ಮಾಡಿದ್ದು 50ಕ್ಕೂ ಅಧಿಕ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ.

ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ: ಕಾಳಜಿ ಕೇಂದ್ರಕ್ಕೆ ಸಂತ್ರಸ್ತರ ಸ್ಥಳಾಂತರ

ಹುನ್ನರಗಿ ಗ್ರಾಮದ 41 ಕುಟುಂಬಗಳಲ್ಲಿಯ ಒಟ್ಟು 89 ಜನರಿಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 26 ಕುಟುಂಬಗಳು ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಸ್ಥಾಪಿಸಿದ ಗಂಜಿ ಕೇಂದ್ರದಲ್ಲಿ ಸ್ಥಳಾಂತರಿಸಲಾಗಿದೆ. ಇನ್ನುಳಿದ 15 ಕುಟುಂಬಗಳು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.

ಹುನ್ನರಗಿ ಗ್ರಾಮದ ಪಕ್ಕದ ಸಿದ್ನಾಳ ಗ್ರಾಮದಲ್ಲಿಯೂ ಕೂಡ 4 ಕುಟುಂಬಗಳಿಗೆ ಸ್ಥಳಾಂತರಿಸಲಾಗಿದೆ. ನಾಲ್ಕೂ ಕುಟುಂಬಗಳು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಸಿದ್ನಾಳ ಗ್ರಾಮದ ಸರ್ಕಾರಿ ಮರಾಠಿ ಗಂಡು ಮಕ್ಕಳ ಶಾಲೆಯಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ ಎಂದು ತಹಶೀಲ್ದಾರ್‌ ಮುಜಫ್ಫರ್ ಬಳಿಗಾರ ಹೇಳಿದ್ದಾರೆ.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ