Breaking News

ಉಮೇಶ ಕತ್ತಿ ಅವರು ಸಚಿವರಾಗಬೇಕು:ಮಹಾಂತೇಶ ಕವಟಗಿಮಠ

Spread the love

ಬೆಳಗಾವಿ : ಬೆಳಗಾವಿ ಬಿಜೆಪಿ ಹಿರಿಯ ನಾಯಕ, 8 ಬಾರಿ ಶಾಸಕರಾದ ಉಮೇಶ ಕತ್ತಿ ಅವರು ಸಚಿವರಾಗಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಪಾಂಗೀರೆ ಗ್ರಾಮದಲ್ಲಿ ಸೋಮವಾರ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರರಚನೆ ಇದು ಸಂಪೂರ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಹಿರಿಯ ಶಾಸಕ ಉಮೇಶ ಕತ್ತಿ ಅವರು ಸಚಿವರಾಗಬೇಕು ಎಂದರು.

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಮೇಲಾಗಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ ರಚನೆ ಆಗಬೇಕಾಗಿದೆ. ಸಚಿವ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬುದು ಸಿಎಂ ಮತ್ತು ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಹಿರಿಯ ಶಾಸಕ ಉಮೇಶ ಕತ್ತಿ ಸಚಿವರಾಗಬೇಕಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ  ಎಂದು ಹೇಳಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ