Breaking News

ಗುಡ್​ನ್ಯೂಸ್: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ

Spread the love

ಬೆಂಗಳೂರು, ಜುಲೈ 26: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶದ ಜೊತೆಗೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಸಚಿವ ಎಚ್‌ ಕೆ ಪಾಟೀಲ್‌ ಹೇಳಿದರು.

 

ಈ ಕುರಿತು ಸಚಿವ ಸಂಪುಟದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿಯ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಪ್ರಸ್ತಾಪಿಸಿತ್ತು.

ಪ್ರಸ್ತಾಪಕ್ಕೆ ದಿನಾಂಕ: 21.06.2024ರ ಸರ್ಕಾರಿ ಆದೇಶಕ್ಕೆ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ಇದು ಅನ್ವಯವಾಗುತ್ತದೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ತಿಳಿಸಿದರು.


Spread the love

About Laxminews 24x7

Check Also

ಹಾಸನಾಂಬೆಯ ದಾಖಲೆಯ ದರ್ಶನ: ಒಂದೇ ದಿನ 3.10 ಲಕ್ಷ ಭಕ್ತರ ಆಗಮನ

Spread the loveಹಾಸನ: ಈ ವರ್ಷ ಹಾಸನಾಂಬೆ ದೇವಾಲಯಕ್ಕೆ ಒಂದು ವಾರದಲ್ಲಿ 13.89 ಲಕ್ಷ ಭಕ್ತರು ಹರಿದುಬಂದಿದ್ದು, ಶುಕ್ರವಾರ ಒಂದೇ ದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ