Breaking News

ದೇಶದಲ್ಲಿ ಕಳೆದ 5 ವರ್ಷಗಳಲ್ಲಿ 628 ಹುಲಿಗಳು ಸಾವು

Spread the love

ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 628 ಹುಲಿಗಳು ನೈಸರ್ಗಿಕ ಕಾರಣಗಳು ಮತ್ತು ಬೇಟೆ ಸೇರಿದಂತೆ ಇತರ ಕಾರಣಗಳಿಂದ ಸಾವನ್ನಪ್ಪಿವೆ ಎಂದು ಸರಕಾರದ ಅಂಕಿಅಂಶಗಳು ತಿಳಿಸಿವೆ.

ಅವಧಿಯಲ್ಲಿ ಹುಲಿ ದಾಳಿಯಲ್ಲಿ 349 ಜನರು ಪ್ರಾಣಕಳೆದುಕೊಂಡಿದ್ದು ಮಹಾರಾಷ್ಟ್ರವೊಂದರಲ್ಲೇ ಅತ್ಯಧಿಕ 200 ಮಂದಿಯ ಸಾವು ದಾಖಲಾಗಿದೆ.

Government data;ದೇಶದಲ್ಲಿ ಕಳೆದ 5 ವರ್ಷಗಳಲ್ಲಿ 628 ಹುಲಿಗಳು ಸಾವು

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಪ್ರಕಾರ, 2019 ರಲ್ಲಿ 96, 2020 ರಲ್ಲಿ 106, 2021 ರಲ್ಲಿ 127, 2022 ರಲ್ಲಿ 121 ಮತ್ತು 2023 ರಲ್ಲಿ 178 ಹುಲಿಗಳು ಸಾವನ್ನಪ್ಪಿವೆ. 2023 ರಲ್ಲಿ ಅತೀ ಹೆಚ್ಚು ಹುಲಿಗಳು ಸಾವನ್ನಪ್ಪಿವೆ ಎಂದು ಅಂಕಿ ಅಂಶಗಳು ಬಹಿರಂಗ ಪಡಿಸಿವೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪರಿಸರ ಖಾತೆಯ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ‘2019 ಮತ್ತು 2020 ರಲ್ಲಿ 49, 2021 ರಲ್ಲಿ59 ,2022 ರಲ್ಲಿ110, 2023 ರಲ್ಲಿ 82 ಮಂದಿ ಹುಲಿ ದಾಳಿಗೆ ಬಲಿಯಾಗಿದ್ದಾರೆ ಎಂದು ವಿವರ ನೀಡಿದ್ದಾರೆ. ಉತ್ತರಪ್ರದೇಶದಲ್ಲಿ 59 ಮಂದಿ,ಮಧ್ಯಪ್ರದೇಶದಲ್ಲಿ 27 ಮಂದಿ ಹುಲಿಗಳ ದಾಳಿಗೆ ಬಲಿಯಾಗಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ