Breaking News

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ

Spread the love

ಶಿವಮೊಗ್ಗ: ಗಾಜನೂರಿನ ತು೦ಗಾ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ಗಿಂತಲೂ ಅಧಿಕ ನೀರು ಬರುತ್ತಿದ್ದು ಅಷ್ಟೇ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿರುವುದರಿಂದ ಈ ಭಾಗದ ರಸ್ತೆಗಳು ಜಲಾವೃತವಾಗುತ್ತದೆ. ಇದರಿಂದ ಗದ್ದೆ ತೋಟಗಳು ಮುಳುಗಿ ತುಂಬಾ ನಷ್ಠವಾಗುತ್ತಿದೆ.

ಪ್ರತಿ ವರ್ಷದ ಮಳೆಗಾಲದಲ್ಲಿ ಈ ಪರಿಸ್ಥಿತಿ ಉಂಟಾಗುತ್ತಿದ್ದು ಇದಕ್ಕೊಂದು ಶಾಶ್ವತ ಪರಿಹಾರವನ್ನು ಸರ್ಕಾರ ಕೈಗೊಳ್ಳಬೇಕಿದೆ ಎಂಬುದು ಈ ಭಾಗದ ರೈತರ, ಗ್ರಾಮಸ್ಥರ ಮತ್ತು ಭಕ್ತರ ಆಗ್ರಹವಾಗಿದೆ.

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ. ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಿದ್ದು ಶನಿವಾರ 178 ಅಡಿಗಳಿಗೆ ತಲುಪಿದೆ. ಗರಿಷ್ಠ ಮಟ್ಟ ತಲುಪಲು ಇನ್ನು ಕೇವಲ 8 ಅಡಿ ನೀರು ಬರಬೇಕಿದೆ.
ಜಲಾಶಯಕ್ಕೆ ಪ್ರಸ್ತುತ 50 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು ಜಲಾಶಯದ ಹಿತದೃಷ್ಟಿಯಿಂದ ಯಾವ ಸಮಯದಲ್ಲಾದರೂ ನದಿಗೆ ನೀರನ್ನು ಹರಿಸುವ ಸಾಧ್ಯತೆ ಇದ್ದು ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವ೦ತೆ ಭದ್ರ ಅಧೀಕ್ಷಕ ಇಂಜನಿಯರ್ ಸುಜಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ