ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಮೀಪದ ಕೃಷ್ಣಾ ನದಿಯಲ್ಲಿ ದಿನದಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಶನಿವಾರ ಹಿಪ್ಪರಗಿ ಜಲಾಶಯಕ್ಕೆ 2,28,056 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುರಿಂದ ಅವಳಿ ರಬಕವಿ-ಬನಹಟ್ಟಿ ನಗರಗಳಿಗೆ ನೀರು ಪೂರೈಸುವ ಜಾಕವೆಲ್‌ಗಳಿಗೆ ಹೋಗುವ ಮಾರ್ಗ ಬಂದಾಗಿದೆ. ಸದ್ಯ ಜಾಕವೆಲ್‌ಗಳು ಸಂಪೂರ್ಣವಾಗಿ ನಡುಗಡ್ಡೆಗಳಾಗಿವೆ.
ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಕೃಷ್ಣಾ ನದಿಯ ತನ್ನ ಒಡಲು ಬಿಟ್ಟು ಹೊರಗೆ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ತೀರದ ಹಲವಾರು ಎಕರೆಯಷ್ಟು ಭೂ ಪ್ರದೇಶದಲ್ಲಿ ಬೆಳೆದ ಬೆಳೆಗಳು ನೀರಿನಲ್ಲಿ ನಿಂತಿವೆ. ಹಿಪ್ಪರಗಿ ಜಲಾಶಯದ ಹಿನ್ನೀರು ಕ್ರಮೇಣವಾಗಿ ಹೆಚ್ಚಾಗುತ್ತಿದೆ. ಇದರಿಂದಾಗಿ ನದಿ ತೀರದ ಹಲವಾರು ಎಕರೆಯಷ್ಟು ಭೂ ಪ್ರದೇಶದಲ್ಲಿ ಬೆಳೆದ ಬೆಳೆಗಳು ನೀರಿನಲ್ಲಿ ನಿಂತಿವೆ. ಹಿಪ್ಪರಗಿ ಜಲಾಶಯದ ಹಿನ್ನೀರು ಕ್ರಮೇಣವಾಗಿ ಹೆಚ್ಚಾಗುತ್ತಿದ್ದು, ಇದ್ದರಿಂದ ಜಾನುವಾರುಗಳನ್ನು ನದಿ ನೀರಿಗೆ ಇಳಿಸಬಾರದು ಎಂದು ತಾಲೂಕು ಆಡಳಿತ ಮುನ್ನಚ್ಚರಿಗೆ ನೀಡಿದೆ