ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭಾನುವಾರ ಮತ್ತು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯಿಂದ ಏರ್ಪಡಿಸಿರುವ ಎರಡನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು.
ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯುವ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.
Laxmi News 24×7