Breaking News

ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ:ವಾಟಾಳ್ ನಾಗರಾಜ್

Spread the love

ಕೊಪ್ಪಳ: ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.

ರೋಲ್‍ಕಾಲ್ ಕನ್ನಡಪರ ಸಂಘಟನೆಗಳ ಬಂದ್‍ಗೆ ಕಿವಿಗೊಡಬೇಕಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್‍ಗೆ ತಲೆ ಸರಿಯಿಲ್ಲ, ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ. ಈ ಹಿಂದೆ ಯಡಿಯೂರಪ್ಪ ಅವರನ್ನೇ ಬೈದಂತವರು, ಅವರ ತಂದೆ ತಾಯಿಗೂ ಬೈಯೋದಿಲ್ಲ ಎಂದು ಏನು ಗ್ಯಾರಂಟಿ ಎಂದು ಹರಿಹಾಯ್ದರು.

ಕನ್ನಡ ಒಕ್ಕೂಟದ ಮುಖಂಡ ಸಾ.ರಾ.ಗೋವಿಂದ್ ಮಾತನಾಡಿ, ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅಲ್ಲ ಸಾವಿರ ಕೋಟಿ ರೂ. ಅನುದಾನ ನೀಡಿ. 50 ಕೋಟಿಯಲ್ಲಿ ನಿಕ್ಕರ್ ಪಂಚೆ ತೆಗೆದುಕೊಳ್ಳಕ್ಕೆ ಆಗಲ್ಲ, ನಾವು ಮರಾಠಿಗರ ಮತ್ತು ಬೇರೆ ಯಾವ ಜಾತಿ ಸಮುದಾಯದ ವಿರುದ್ಧ ಇಲ್ಲ. ಮರಾಠಿಗರ ಶಿಕ್ಷಣ, ಅಭಿವೃದ್ಧಿಗಾಗಿ ಸಾವಿರ ಕೋಟಿ ಕೊಟ್ಟು ಅವರನ್ನ ಅಭಿವೃದ್ಧಿ ಮಾಡಿ ನಮಗೆ ವಿರೋಧವಿಲ್ಲ ಆದರೆ ಮರಾಠಿ ಅಭಿವೃದ್ಧಿ ಪ್ರಾಧಿಕಾರ ಬೇಡ. ಇದರಿಂದ ನಾಳೆ ತಮಿಳು, ತೆಲುಗು, ಮಲಯಾಳಿ, ಮಾರ್ವಾಡಿಯವರು ಬಂದು ಪ್ರಾಧಿಕಾರ ಕೇಳುತ್ತಾರೆ. ಹೀಗಾಗಿ ಕೂಡಲೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಕೈ ಬಿಡಬೇಕೆಂದು ಆಗ್ರಹಿಸಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದನ್ನು ಖಂಡಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೊಪ್ಪಳದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ