Breaking News

ಮಲಪ್ರಭಾ ನದಿ ದಡದಲ್ಲಿ ಮೊಸಳೆಗಳು

Spread the love

ಬೈಲಹೊಂಗಲ: ಸಮೀಪದ ಮಾಟೊಳ್ಳಿ, ಮಲ್ಲೂರ, ಹೊಸೂರ ಗ್ರಾಮದ ಮಲಪ್ರಭಾ ನದಿ ದಡದಲ್ಲಿ ಬೃಹತ್ ಗಾತ್ರದ ಮೊಸಳೆಗಳು ಶನಿವಾರ ಪ್ರತ್ಯಕ್ಷವಾಗಿವೆ.

ಖಾನಾಪೂರ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮಲಪ್ರಭಾ ನದಿಯ ಒಡಲು ದಿನೇ, ದಿನೇ ಹೆಚ್ಚುತ್ತಿದೆ. ಹರಿಯುವ ನದಿಯ ನೀರಿನಲ್ಲಿ ಸರಾಗ ಹರಿದು ಬರುತ್ತಿರುವ ಬೃಹತ್ ಗಾತ್ರದ ಮೊಸಳೆಗಳು ನದಿ ಪಾತ್ರದ ಗ್ರಾಮಸ್ಥರಲ್ಲಿ, ರೈತರಲ್ಲಿ ಆತಂಕ ಉಂಟು ಮಾಡಿವೆ.

ಬೈಲಹೊಂಗಲ: ಮಲಪ್ರಭಾ ನದಿ ದಡದಲ್ಲಿ ಮೊಸಳೆಗಳು

ನದಿಯ ದಂಡೆಯ ಮೇಲೆ ಆಗಾಗ ಕಾಣಿಸಿಕೊಳ್ಳುತ್ತಿರುವ ಬೃಹತ್ ಗಾತ್ರದ ಮೊಸಳೆಗಳನ್ನು ಯುವಕರು ಮೊಬೈಲ್ ಕ್ಯಾಮೆರಾಗಳಲ್ಲಿ ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುತ್ತಿದ್ದಾರೆ.

ಅಧಿಕಾರಿಗಳು ನದಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಮೊಸಳೆಗಳನ್ನು ಸೆರೆ ಹಿಡಿದು ಮುಂದಾಗುವ ಅನಾಹುತ ತಪ್ಪಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ತಹಶೀಲ್ದಾರ್ ಹನುಮಂತ ಶಿರಹಟ್ಟಿ, ಮುಖ್ಯಾಧಿಕಾರಿ ವಿರೇಶ ಹಸಬಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ನದಿ ಪಾತ್ರದ ಗ್ರಾಮಸ್ಥರು, ರೈತರು ಜಾಗೃತಿ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ