ಬೆಂಗಳೂರು, ಜುಲೈ 29: ಕನ್ನಡದ ನಟ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ (KGF film) ಸರಣಿ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ದೇಶಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅವರು ಸದ್ಯ ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಬ್ಯೂಸಿ ಇದ್ದಾರೆ.
ಈ ಮಧ್ಯೆ ಯಶ್ ಅವರ ಹೊಸ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಚ್ಚಿಸಿದೆ. ಟಾಪ್ ಟ್ರೆಂಡಿಂಗ್‌ನಲ್ಲಿದೆ.
ಕೆವಿಎನ್ ಪ್ರೊಡಕ್ಷನ್ ಕಡೆಯಿಂದ ಟಾಕ್ಸಿಕ್ ಸಿನಿಮಾ ಚಿತ್ರೀಕರಣ ಇನ್ನೂ ಶುರುವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಸಿನಿಮಾ ನಿರೀಕ್ಷಿತ ದಿನಾಂಕದಲ್ಲಿ ಬಿಡುಗಡೆ ಅನುಮಾನ ಎನ್ನಲಾಗುತ್ತಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ದೊಡ್ಡ ಸೆಟ್ ಹಾಕಲಾಗಿದೆ ಎಂಬ ಮಾಹಿತಿ ಇದೆ.
ಹೀಗಾಗಿಯೇ ನಟ ಯಶ್ ಅವರು ಬೆಂಗಳೂರಿನ ಲೀಲಾ ಪ್ಯಾಲೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಅದೇನೆ ಇರಲಿದೆ. ಯಶ್ ಅವರ ವಿಡಿಯೋ ನೋಡಿರುವ ಅವರ ಅಭಿಮಾನಿಗಳು ದಿಲ್ ಖುಷ್ ಆಗಿದೆ.